ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಗುಡ್ಡಟ್ಟು ಶ್ರೀವಿನಾಯಕ ದೇವಸ್ಥಾನ ಪುರಾಣ ಪ್ರಸಿದ್ದ ಕ್ಷೇತ್ರ

ಗುಡ್ಡಟ್ಟು ಶ್ರೀವಿನಾಯಕ ದೇವಸ್ಥಾನವು ಒಂದು ಪುರಾಣ ಪ್ರಸಿದ್ದವಾದ ಕ್ಷೇತ್ರವಾಗಿದೆ….

ಕುಂದಾಪುರದಿಂದ ಶಿವಮೊಗ್ಗ ತೆರಳುವ ಮಾರ್ಗದ ಯಡಾಡಿ-ಮತ್ಯಾಡಿ ಗ್ರಾಮದಲ್ಲೊಂದು ತೀರಾ ಅಪರೂಪದ ದೇವಾಲಯ. ಕಾಡು-ಮೇಡು ಹಾಗೂ ಹಸಿರು ಬಯಲಿನ ಮಧ್ಯದಲ್ಲಿರುವ ಬೃಹತ್ ಬಂಡೆಯೇ ಇಲ್ಲಿಯ ಗುಡ್ಡಟ್ಟು ವಿನಾಯಕನ ಆವಾಸಸ್ಥಾನ. ಬಂಡೆಯ ಗುಹೆಯ ಮದ್ಯದಲ್ಲಿ ಪೂರ್ವಾಭಿಮುಖವಾಗಿ ತೆರೆದಿರುವ ಮಡುವಿನಲ್ಲಿ ಕಾಲು ಮಡಚಿ ದಕ್ಷಿಣಕ್ಕೆ ಮುಖಮಾಡಿ ಸೊಂಡಿಲನ್ನು ತಿರುಚಿ ಕುಳಿತಿರುವ ಡೊಳ್ಳು ಹೊಟ್ಟೆಯ ಸ್ವಯಂಭು ವಿಗ್ರಹವೇ ಇಲ್ಲಿಯ ಆರಾದ್ಯ ದೇವ. ಬಹಳಷ್ಟು ಆಕಾರ ಹೊಂದಿರುವ ಶ್ರೀ ದೇವರ ಮೂಲ ಬಿಂಬವು ವರ್ಷದ ಎಲ್ಲಾ ಸಂದರ್ಭದಲ್ಲಿಯೂ ಕಂಠದವರೆಗೂ ನೀರಿನಲ್ಲಿಯೇ ಮುಳುಗಿರುವುದು ಇಲ್ಲಿನ ವಿಶೇಷ. ನಿಸರ್ಗ ಪ್ರಿಯರಿಗಂತೂ ಈ ಕ್ಷೇತ್ರ ರಮಣೀಯ. ರಾಜ್ಯಾದ್ಯಾಂತ ಪ್ರವಾಸಿಗರು ಹುಡುಕಿಕೊಂಡು ಬರುವ ಧಾರ್ಮಿಕ-ಪ್ರೇಕ್ಷಣಿಯ ಸ್ಥಳವಿದು.
ಹಿನ್ನೆಲೆ-ಇತಿಹಾಸ:
ಗುಡ್ಡಟ್ಟು ಶ್ರೀವಿನಾಯಕ ದೇವಸ್ಥಾನವು ಒಂದು ಪುರಾಣ ಪ್ರಸಿದ್ದವಾದ ಕ್ಷೇತ್ರವಾಗಿದೆ. ತ್ರಿಪುರಾಸುರನ ಸಂಹಾರ ಕಾಲದಲ್ಲಿ ಈಶ್ವರನು ಯುದ್ದಕ್ಕೆ ಹೋಗುವಾಗ ಪ್ರಮಾದವಶಾತ್ ಗಣಪತಿಯನ್ನು ಸ್ಮರಿಸದೇ ತೆರಳುತ್ತಾನೆ, ಆದರೆ ಜಯಲಭಿಸದೇ ಪರದಾಡುತ್ತಿರುವಾಗ ತನ್ನ ಮಗನಿಂದಲೇ ತನಗೆ ವಿಘ್ನ ಬಂದಿದೆ ಎಂದು ಅರಿತು ಪರಶಿವನು ಕೋಪಗೊಂಡು ಗಣಪತಿಯ ಮೇಲೆ ಆಗ್ನೇಯಾಸ್ತ್ರವನ್ನು ಪ್ರಯೋಗಿಸುತ್ತಾನೆ ಆದರೆ ಯಾವ ಅಸ್ತ್ರವು ಗಣಪತಿಯನ್ನು ಏನೂ ಮಾಡಲು ಸಾದ್ಯವಾಗಲಿಲ್ಲ. ಅದೇ ರೀತಿಯಲ್ಲಿ ಶಿವನು ಪ್ರಯೋಗಿಸಿದ ಅಸ್ತ್ರ ಹುಸಿಯಾಗಲೂ ಸಾದ್ಯವಾಗಿಲ್ಲ, ಈ ಒಂದು ಸಂದಿಗ್ದ ಪರಿಸ್ಥಿತಿಯಲ್ಲಿ ಆ ಅಸ್ತ್ರವು ಗಣಪತಿಯನ್ನು ಹೊತ್ತೋಯ್ದು ಮಧು ಸಾಗರದಲ್ಲಿ ಕೆಡೆಯುತ್ತಿದೆ ಮಧು ಅರ್ಥಾತ್ ಜೇನು, ತುಪ್ಪ ಗಣಪತಿಗೆ ಅತಿ ಪ್ರಿಯವಾದ ವಸ್ತುವಾದ ಕಾರಣ ಯಥೇಚ್ಚ ಮಧುಪಾನ ಮಾಡಿದ ಗಣಪತಿಯ ವೃತನಾಗಿ ತನ್ನನ್ನು ಇಲ್ಲಿಗೆ ತಂದು ಹಾಕಿದವರ ಕಾರ್ಯ ಜಯವಾಗಲೆಂದು ವರಪ್ರಸಾದ ಮಾಡುತ್ತಾನೆ. ತತ್ ಪರಿಣಾಮ ತ್ರಿಪುರಾಸುರನ ಸಂಹಾರವಾಗಿ ಶಿವನಿಗೆ ಜಯ ಲಭಿಸುತ್ತದೆ. ಆದರೆ ಅತಿಯಾದ ಸಿಹಿ/ಮಧು ಸೇವನೆಯಿಂದ ದೇಹದಲ್ಲಿ ಉಷ್ಣ ಹೆಚ್ಚಾಗಿ ಉರಿ ಪ್ರಾರಂಭಿಸುವುದು ಸ್ವಾಭಾವಿಕ ಇದೇ ಪರಿಸ್ಥಿತಿ ಗಣಪತಿಗೆ ಪ್ರಾಪ್ತಿಯಾಗಿ ಮಧುಸಾಗರದಲ್ಲಿ ಉಷ್ಣಾಧಿಕದಿಂದ ಒದ್ದಾಡುತ್ತಿರುತ್ತಾನೆ. ಇದನ್ನು ಗಮನಿಸಿದ ಶಿವನು ಗಣಪತಿಯ ಉರಿ ಶಮನಕ್ಕಾಗಿ ನರಸಿಂಹ ತೀರ್ಥದಲ್ಲಿ ಜಲಾಧಿವಾಸವಾಗಿರು ಎಂದು ಈ ಸ್ಥಾನವನ್ನು ಗಣಪತಿಗೆ ಅನುಗ್ರಹಿಸುತ್ತಾನೆ. ಅಂತೆಯೇ ಇಲ್ಲಿ ಹರಿಯುವ ವಾರಾಹಿ ಉಪ ನದಿ ನರಸಿಂಹ ತೀರ್ಥ ಎಂಬ ನದಿಯ ಪಕ್ಕದಲ್ಲಿ ಇರುವ ಬಂಡೆಯ ಮಡುವಿನಲ್ಲಿ ಜಲಾದಿವಾಸವಾಗಿ ನೆಲೆಸಿ ಗಣಪತಿಯು ಭಕ್ತರನ್ನು ಉದ್ದರಿಸುತ್ತಾನೆ ಎಂಬುವುದು ನಂಬಿಕ

  ಮಕ್ಕಳು ಬೇಡಿದ್ದನ್ನು ಕೊಡಬಾರದು - ಮಹಾಭಾರತದ ಕಥೆ

ಮಾರ್ಗ:
ಉಡುಪಿಯಿಂದ- ಬ್ರಹ್ಮಾವರ-ಬಾರ್ಕೂರು- ಶಿರಿಯಾರ- ಗುಡ್ಡಟ್ಟು-28 ಕಿಲೋ ಮೀಟರ್
ಕುಂದಾಪುರದಿಂದ-ಶಿವಮೊಗ್ಗ ಮಾರ್ಗವಾಗಿ- ಕೋಟೇಶ್ವರ-ಗುಡ್ಡಟ್ಟು-18 ಕಿಲೋ ಮೀಟರ್.
ಶಿವಮೊಗ್ಗ_ ಹೊಸಂಗಡಿ-ಸಿದ್ದಾಪುರ- ಶಂಕರನಾರಾಯಣ-ಗುಡ್ಡಟ್ಟು-147 ಕಿಲೋ ಮೀಟರ್…

Leave a Reply

Your email address will not be published. Required fields are marked *

Translate »