ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಮರಣ ಕಾಲದಲ್ಲಿ ಯಾವ ರೀತಿಯ ಯೋಚನೆಗಳು ಬರಬಹುದು.?

ಮರಣ ಕಾಲದಲ್ಲಿ ಯಾವ ರೀತಿಯ ಯೋಚನೆಗಳು ಬರಬಹುದು.?

ಇದೊಂದು ನಂಬಲಾರದಂತಹ ವಿಚಾರ. ಆದರೆ ನಮ್ಮ ಗುರುಹಿರಿಯರು, ಪಂಡಿತೋತ್ತಮರು, ಪುರಾತನ ಮಹಾನ್ ಋಷಿಮುನಿಗಳು ಭೂತ, ಭವಿಷ್ಯತ್ ವರ್ತಮಾನ ಕಾಲಗಳನ್ನು ಬಲ್ಲಂತಹ ತ್ರಿಕಾಲ ಜ್ಞಾನಿಗಳು ಅಲ್ಲವೇ.?

ಮಹಾಮಹಿಮರಾದ ಅವರು ನಡೆಸಿದ ಸಂಶೋಧನೆಗಳಿಗಿಂತ ಮಿಗಿಲು ನಮಗ್ಯಾವುದೂ ಇಲ್ಲ. ಕೇವಲ ನಾವಿಂದು ಅದನ್ನು, ಅವರ ಆ ಅಪೂರ್ವ ಸಂಶೋಧನೆಗಳನ್ನು ಹುಡುಕಿ, ಇಂದಿನ ವ್ಯಾವಹಾರಿಕತೆಗೆ ಹೊಂದುವಂತೆ ಬರೆಯಬಹುದಷ್ಟೆ.. ಮನುಷ್ಯನು ತನ್ನ ಕೊನೆಯುಸಿರಿನ ಕಾಲದಲ್ಲಿ ಏನು ಯೋಚಿಸಿರುವನು.? ಇದನ್ನು ಹೇಳಲಿಕ್ಕೆ ಆ ಮನುಷ್ಯನು ಇರುವುದಿಲ್ಲ. ಮರಣಕ್ಕೆ ಕೆಲ ಘಳಿಗೆಗೆ ಮುಂಚೆ ಕೆಲವರು ಅವರ ಮನದ ಇಂಗಿತಗಳನ್ನು ಹೇಳಿದ್ದಿದೆ. ಆದರೆ ಕೊನೆಯ ಉಸಿರಿನಲ್ಲಿ ಇರುವಾಗ ಮನದ ಯೋಚನೆಗಳು ಏನಿರಬಹುದು ಎಂದು ಯೋಚಿಸಿದವರಿಲ್ಲ. ಇಲ್ಲಿ ನಾಲ್ಕುವಿಧಗಳ ಚಿಂತನೆಗಳಿವೆ. “ಆರ್ತ, ರೌದ್ರ, ಧನ್ಯ ಮತ್ತು ಶುಕ್ಲ.” ಇವುಗಳಲ್ಲಿ ಯಾವುದಾದರೂ ಒಂದು ಚಿಂತನೆ ಬರಲೇಬೇಕು ಎಂಬುದು ಮರಣಕಾಲದ ಸಿದ್ಧಾಂತ..

1. ಆರ್ತ ಮರಣ:

ಹೆಸರೇ ಹೇಳುತ್ತದೆ ಆರ್ತನಾದ ಎಂದು. ಅಯ್ಯೋ, ನನ್ನ ಮಕ್ಕಳು, ನನ್ನ ಹೆಂಡತಿ, ನನ್ನ ಆಸ್ತಿ ಎಲ್ಲಾ ಬಿಟ್ಟು ಹೋಗಬೇಕಲ್ಲಾ ಎಂಬ ದುಃಖ ಬರುತ್ತದೆ. ನೀವು ನೋಡಿರಬಹುದು. ಕೆಲಮನುಷ್ಯರು ಮರಣ ಕಾಲಕ್ಕೆ ಸದಾ ಅಳುವವರನ್ನು. ಅಂದರೆ ಇವರಿಗೆ ಈ ಲೋಕದ ವ್ಯಾಮೋಹವನ್ನು ತುಂಡು ಮಾಡಿ ಹೋಗಲು ಆಗುತ್ತಿಲ್ಲ. ಆ ಕಡೆಯಿಂದ ಯಮಪಾಶ ಎಳೆಯುತ್ತದೆ. ಹಾಗಾಗಿ ದುಃಖಿಸುತ್ತಾರೆ. ಆಗ ಅವರ ಮಕ್ಕಳು ‘ಅಪ್ಪಾ, ಅಜ್ಜಾ, ಅಮ್ಮಾ, ನಿನಗೆ ಏನು ಆಸೆ ಇದೆ ಹೇಳು‘ ಎಂದು ಸಾಂತ್ವನ ಹೇಳುತ್ತಾರೆ. ಅಂತೂ ಕೊನೆಗೆ ಕ್ಷೀಣವಾಗಿ ಆತ ಇಹಲೋಕವನ್ನು ಒತ್ತಾಯ ಪೂರ್ವಕವಾಗಿ ತ್ಯಜಿಸಬೇಕಾಗುತ್ತದೆ. ಇದನ್ನು “ಆರ್ತ ಮರಣ” ಎಂದಿದ್ದಾರೆ. ‘ಯಥಾ ಮರಣ ಸ್ವರೂಪಂ ತಥಾ ಪುನರ್ಜಃನ್ಮಃ’ ಅಂದರೆ ಯಾವ ಚಿಂತೆಯಲ್ಲಿ ಸಾಯುತ್ತಾನೋ ಅದೇ ಸ್ವರೂಪದ ಪುನರ್ಜನ್ಮ ಲಭಿಸುತ್ತದೆ. ಈ ರೀತಿಯಲ್ಲಿ ಹುಟ್ಟಿದವರು ಮುಂದಿನ ಜನ್ಮದಲ್ಲಿ ಹೇಗಿರುತ್ತಾನೆ ಎಂಬುದು ನವಜಾತ ಶಿಶುವಿನ ಅಳುವು ಸೂಚಿಸುತ್ತದೆ. ನೀವು ಗಮನಿಸಿ, ನವಜಾತ ಶಿಶುವು ವಿಪರೀತ ಅಳುವುದು ಈ ಸಂಬಂಧದಿಂದ. ಇದೊಂದು ರೀತಿಯ ಮಾನವನ ಮನಶಾಸ್ತ್ರದ ಕಲಿಕೆಯಂತೆ. ಈ ವ್ಯಕ್ತಿ ಜೀವನದಲ್ಲಿ ಜಿಪುಣ, ದುಃಖಿತನಾಗಿ ಬಾಳುತ್ತಾನೆ. ಅದರೆ ಉತ್ತಮ ಪ್ರಾಜ್ಞರು, ಸಂಯೋಜಕರಿದ್ದರೆ ಇದನ್ನು ಸರಿ ಮಾಡಲು ಸಾಧ್ಯವಿದೆ. ಅದಕ್ಕಾಗಿಯೇ, ವಿದ್ವಜ್ಜನರ ಸಂಪರ್ಕ ಬೇಕು ಎನ್ನುವುದು..

2. ರೌದ್ರ ಮರಣ:

ನೀವು ಕೆಲ ಮನುಷ್ಯರು ಆಡುವ ಮಾತುಗಳನ್ನು ಕೇಳಿರಬಹುದು. ‘ನಾನು ಸತ್ತರೂ ನನ್ನ ಹೆಣ ಮುಟ್ಟಬೇಡ, ನಾನು ಸತ್ತರೂ ದೆವ್ವವಾಗಿ ನಿನ್ನನ್ನು ಬಿಡುವುದಿಲ್ಲ, ನನ್ನ ಚಿತೆಗೆ ಹಿರೀಮಗ ಕೊಳ್ಳಿ ಇಡುವುದು ಬೇಡ, ನಾನು ಸತ್ತರೆ ನೀನು ನನ್ನ ಅಂತ್ಯ ವಿಧಿ (ತಿಥಿ) ಮಾಡಬೇಡ..,’ ಇತ್ಯಾದಿ ಮಾತಾಡುವವರಿಗೆ ರೌದ್ರ ಚಿಂತನೆ ಮರಣವಿರುತ್ತದೆ. ಇವರ ಮುಂದಿನಜನ್ಮ ಕಲಹ ಸ್ವರೂಪದಲ್ಲಿಯೇ ಇರುತ್ತದೆ. ಇಂತವರ ಪುನರ್ಜನ್ಮದಲ್ಲಿ ಶಿಶುವಿನಿಂದಲೇ ಈ ಗುಣವನ್ನು ನಾವು ತಿಳಿಯಬಹುದು. ವಿಪರೀತ ಹಟ ಮಾಡುವಿಕೆ, ಕೋಪದಿಂದ ಮಗುವಿನ ಮುಖದ ವರ್ಣವೇ ಬದಲಾಗುವುದು, ಹಾಲಿನ ಬಾಟಲಿಯನ್ನು ಕಿತ್ತು, ಎಳೆದು ಬಿಸಾಡುವಿಕೆ, ಸಮಯ ಸಿಕ್ಕಾಗಲೆಲ್ಲಾ ಪರಚುವುದು, ಕಚ್ಚುವುದು, ಕೆಲ ಜನರನ್ನು ಕಂಡರೆ ಅಳುವುದು.. ಇತ್ಯಾದಿ ಗುಣಗಳಿರುತ್ತದೆ. ಇಂತಹ ಗುಣಗಳನ್ನುಳ್ಳ ಮಗುವನ್ನು ಅದರ ಮಾತಾಪಿತೃಗಳು ಅತ್ಯಂತ ಪ್ರಯತ್ನ ಪಟ್ಟು ಒಳ್ಳೆಯ ಪೋಲೀಸ್ ಅಧಿಕಾರಿಯೋ, IAS ಅಧಿಕಾರಿಯನ್ನೋ ಮಾಡಿದಾಗ ಈ ಮನಃ ಪರಿವರ್ತನೆಯಾಗಿ ಆತ ಒಬ್ಬ ನಿಷ್ಟಾವಂತ ಮನುಷ್ಯನಾಗಬಹುದು. ಇಲ್ಲವಾದಲ್ಲಿ ಮತ್ತೆ ಪಾಪಿಯೇ ಆಗಬಹುದು..

ಧನ್ಯ ಮರಣ:

ಈ ವ್ಯಕ್ತಿಯು ಜೀವನದಲ್ಲಿ ಸದಾ ಸಜ್ಜನಿಕೆಯುಳ್ಳವನೇ. ಇವನು ತನ್ನ ಕೊನೆಯ ಕಾಲದಲ್ಲಿ, ‘ನಾನು ಯಾರಿಗೂ ಅನ್ಯಾಯ ಮಾಡಿಲ್ಲ, ಅನೇಕ ಜನರಿಗೆ, ಸಂಘ, ಸಂಸ್ಥೆಗಳಿಗೆ ದಾನ ಮಾಡಿದ್ದೇನೆ, ಯಾರನ್ನೂ ದೂಷಿಸಿಲ್ಲ, ಒಟ್ಟಿನಲ್ಲಿ ಸತ್ಯದಲ್ಲೇ ನಡೆದಿದ್ದೇನೆ ಎಂದು ಯೋಚಿಸುತ್ತಾ ಜೀವ ಬಿಡುತ್ತಾನೆ. ಇದು ಧನ್ಯ ಚಿಂತನಾ ಮರಣ. ಮುಂದಿನ ಜನ್ಮದಲ್ಲಿ ಇವನು ಸಾತ್ವಿಕನೂ ಶ್ರೀಮಂತನೂ, ದಾನಿಯೂ ಆಗಿ ಹುಟ್ಟುತ್ತಾನೆ. ಇವನು ಪುಟ್ಟ ಮಗುವಿದ್ದಾಗಲೂ ಯಾರಿಗೂ ಹಿಂಸೆ ನೀಡುವುದಿಲ್ಲ. ನೀವು ಕೆಲ ತಾಯಂದಿರ ಮಾತು ಕೇಳಿರಬಹುದು. ನನ್ನ ದೊಡ್ಡ ಮಗ ಶಿಶುವಾಗಿದ್ದಾಗ ರಗಳೆಯೇ ಇಲ್ಲ. ಹಾಲು ಕೊಟ್ಟು ಮಲಗಿಸಿದರೆ ಅವನಷ್ಟಕ್ಕೇ ಆಟವಾಡಿಕೊಂಡು ಇರುತ್ತಾನೆ. ಅಳುವುದು ಬಾರೀ ಕಡಿಮೆ. ಅಂತೂ ಇವನ ಬಾಲ್ಯದಲ್ಲಿ ನನಗೇನೂ ರಗಳೆಯಾಗಲಿಲ್ಲಪ್ಪ,’ ಎಂದು ಮಗುವಿನ ಬಗ್ಗೆ ಗುಣಗಾನ ಮಾಡುತ್ತಾಳೆ. ಇದು ಧನ್ಯ ಚಿಂತನೆಯಲ್ಲಿ ಮರಣಿಸಿದವನ ಪುನರ್ಜನ್ಮದ ರೂಪ..

ಶುಕ್ಲ ಮರಣ:

ಈ ಮರಣ ಬರುವುದು ತುಂಬಾ ಅಪರೂಪ.. ಅದರಲ್ಲೂ, ಕಲಿಯುಗದಲ್ಲಂತೂ ಲಕ್ಷಕ್ಕೆ ಒಬ್ಬರಿಗೆ ಮಾತ್ರ ಎನ್ನಬಹುದು. ಇದು ಹೇಗೆಂದರೆ, ಇವರ ಮರಣ ಕಾಲದಲ್ಲಿ ಅವರ ಕ್ರಿಯಾ ಉದ್ದೇಶ, ಚಿಂತನೆ, ತಾನು ಏನು ಮಾಡಿದ್ದೇನೆ ಎಂಬುದರ ಮೆಲುಕು ಇವರಲ್ಲಿ ಇಲ್ಲ. ಉದಾ: ಮಾಜಿ ರಾಷ್ಟ್ರಪತಿ ಕಲಾಂ ಮೇಷ್ಟ್ರು, ಯಕ್ಷಗಾನ ವೇಷಧಾರಿಯಾದ ಕೆರೆಮನೆ ಶಂಬು ಹೆಗ್ಗಡೆ, ಯಕ್ಷಗಾನ ಭಾಗವತರಾದ ದಾಮೋದರ ಮಂಡೆಚ್ಚರು, ಹೋರಾಟದಲ್ಲೇ ಮಡಿಯುವ ಯೋಧರು ಇತ್ಯಾದಿ.. ತಮ್ಮ ಉದ್ದೇಶಿತ ಕೆಲಸದ ಮಧ್ಯದಲ್ಲೇ ಅಸು ನೀಗುವವರು. ಅವರಿಗೆ ಗತಕಾಲದ ಚಿಂತನೆಗಳಿಲ್ಲ. ಆ ಕಾಲದ, ಆ ಕ್ಷಣದ ವಿಚಾರ ಮಾತ್ರವೇ ಇರುತ್ತದೆ. ಇನ್ನು ಕೆಲ ಜ್ಞಾನಿಗಳೂ ಶುಕ್ಲ ಚಿಂತನೆಯಲ್ಲಿ ಕೊನೆಗೊಳ್ಳುತ್ತಾರೆ. ಇವರು, ನಾನು ಏನೂ ಮಾಡಲಿಲ್ಲವಪ್ಪಾ, ಎಲ್ಲಾ ದೈವ ಪ್ರೇರಣೆಯಂತೆ ನನ್ನ ಮೂಲಕ ನಡೆದಿರಬಹುದು, ನಾನು ಕೇವಲ ನಿಮಿತ್ತಮಾತ್ರ ಎಂದು ಯೋಚಿಸುವವರು.. ಇವರು ತಪ್ಪಿಯೂ ನನಗೆ ಮೋಕ್ಷ ಸಿಗಲಿ ಎಂದು ಬಯಸುವವರಲ್ಲ. ಆದರೆ ನೂರಕ್ಕೆ ನೂರು, ಇಂಥಹವರಿಗೆ ಮೋಕ್ಷ ಯೋಗವಿರುತ್ತದೆ. “ಆತ್ಮಕಾರಕ ಶುಭಗ್ರಹ ಮೀನಾಂಶದಲ್ಲಿ” ಬಂದವರಿಗೆ ನಿಶ್ಚಿತವಾಗಿಯೂ ಮೋಕ್ಷ ಯೋಗವಿದೆ. ಇಂತವರಿಗೆ ಮರುಹುಟ್ಟಿಲ್ಲ. ಆದರೆ, ಇವರು ಮೊದಲು ಉಳಿದ ಆರ್ತ, ರೌದ್ರ, ಧನ್ಯ, ಮೂರೂ ಮರಣಗಳನ್ನು ದಾಟಿಯೇ ಬರಬೇಕು. ಇದು ಒಂದು ರೀತಿಯ ವಿಕಾಸ. ‘ಅಯೋಗ್ಯ ಪುರುಷಂ ನಾಸ್ತಿ’ ಎಂದು ವೇದಗಳು ಹೇಳಿವೆ. ಆದರೆ ಮಾನವರಿಗೆ ಸಂಯೋಜಕರು, ಜೊತೆಗಾರರು, ಗುರುಹಿರಿಯರು ಸರಿ ಇರಬೇಕು. ಅದು ಸರಿ ಇಲ್ಲದಿದ್ದಾಗ ಅಯೋಗ್ಯರಾಗಬಹುದು. ಅದಕ್ಕಾಗಿಯೇ ಪೂರ್ವ ಶೋಡಶ ಸಂಸ್ಕಾರಗಳಿರುವುದು. ಆದರೆ, ಅದರ ಉದ್ದೇಶ ತಿಳಿಯದೆ ಸಂಸ್ಕಾರ ಪಡೆದರೂ ಪ್ರಯೋಜನವಿಲ್ಲ. ಅರ್ಥ ತಿಳಿದರೆ ಮಾತ್ರ ಅವನಿಗೆ ಹಂತ ಹಂತಗಳಲ್ಲಿ ಜ್ಞಾನಾಭಿವೃದ್ಧಿ ಆಗುತ್ತದೆ. ಜ್ಞಾನಿಗೆ ದುಃಖ ಸುಳಿಯದು. ದುಃಖರಹಿತನಿಗೆ “ಶುಕ್ಲ” ರೂಪದ ಮರಣವೂ ಮೋಕ್ಷವೂ ಲಭ್ಯವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ತಮ್ಮ ಕೊನೆಯ ಕ್ಷಣದಲ್ಲಾದರೂ ‘ನಾರಾಯಣ, ನಾರಾಯಣ, ನಾರಾಯಣ..’ ಎಂಬ ನಾಮಸ್ಮರಣೆಯನ್ನು ಮಾಡಲು ಇದಕ್ಕಾಗಿಯೇ ಪ್ರಾಜ್ಞರು ಸಲಹೆ ಮಾಡಿದ್ದರು..

“ನಾರಾಯಣನೇ ಮೋಕ್ಷದಾಯನು., ನಾರಾಯಣ ನಾಮವೇ ಮೋಕ್ಷದಾಯಕವು..
🙏🏻🙏🏻🙏🏻

Leave a Reply

Your email address will not be published. Required fields are marked *

Translate »