ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಕನ್ನಡ ಗಾದೆಮಾತು ಸಂಗ್ರಹ ಭಾಗ – ೮ Wisdom Words Kannada

ಕನ್ನಡ ಗಾದೆ ಮಾತು | Kannada Gaade Maathu | Kannada Gaadegalu | ಕನ್ನಡ ಗಾದೆಗಳು | Kannada Proverbs |ಕನ್ನಡ ಜನಪ್ರಿಯ ಗಾದೆಗಳು | Kannada Popular Proverbs | Janapriya Gaadegalu | Kannada Gaadegalu | ಕನ್ನಡ ಗಾದೆಗಳು | Kannada Proverbs | ಜನಪ್ರಿಯ ಗಾದೆಗಳು | kannada gaade maathu | ಗಾದೆ ವಿಸ್ತರಣೆ | Gaade expand | ಗಾದೆ ಅರ್ಥ ಸಹಿತ | proverbs with meanings

ಕನ್ನಡ ಗಾದೆಮಾತು ಸಂಗ್ರಹ ಭಾಗ – ೮ Wisdom Words Kannada

ತಾನಾಗಿ ಬೀಳುವ ಮರಕ್ಕೆ ಕೊದಲಿ ಏಟು ಹಾಕಿದ ಹಾಗೆ .
ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
ಹೇಳೊದು ವೇದ ಹಾಕೊದು ಗಾಳ
ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
ಸರಿಸರಿಯಾಗಿದ್ರೆ,ಪರಿಪರಿ ನೆಂಟರು
ಮೃತ್ಯು ಬಂದ ಮೇಲೆ ವೈದ್ಯ ಬಂದ.
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಹಿತ್ತಿಲ ಗಿಡ ಮದ್ದಲ್ಲ
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
ಹುಟ್ಟಿದವಗೆ ಸಾವು ತಪ್ಪದು
ಒಂದು ಹೊತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನ್ನ ಹೊತ್ತುಕೊಂಡು ಹೋಗಿ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
ಮುದಿ … ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ತುಂಬಿದ ಕೊಡ ತುಳುಕುವುದಿಲ್ಲ.
ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
ಸಾರು ಉಕ್ಕಬಾರದು ಹೆಣ್ಣು ಸೊಕ್ಕಬಾರದು.
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಹೂವಿನಿಂದ ನಾರು ಸ್ವರ್ಗ ಸೇರಿತು
ಸಿರಿ ಸೋಂಕಿದವರ ಪರಿ ಬೇರೆ
ಹಿತ್ತಲ ಗಿಡ ಮದ್ದಲ್ಲ
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
ದೇವರು ವರ ಕೊಟ್ರು ಪೂಜಾರಿ ಕೊಡ.
ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ
ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
ಹೂವಿನ ಜೊತೆ ದಾರ ಮುಡಿಯೇರಿತು
ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಿಕ್ಕು
ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
ಶಿವಾ ಅರಿಯದ ಸಾವು ಇಲ್ಲ ಮನ ಅರಿಯದ ಪಾಪ ಇಲ್ಲ
ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
ಚಿತ್ತಾ ಮಳೆ ವಿಚಿತ್ರ ಬೆಳೆ!
ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
ತಾಳಿದವ ಬಾಳ್ಯಾನು
ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ಕಳ್ಳನಿಗೊಂದು ಪಿಳ್ಳೆ ನೆವ
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಉಂಡೂ ಹೋದ; ಕೊಂಡೂ ಹೋದ
ನಾಯಿ ಬಾಲ ಡೊಂಕು
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ತಾಯಿಗೆ ಕಂಡರೆ ತಲೆ ನೋವು
ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ನಾಯಿ ಬಾಲಕ್ಕೆ ದಬ್ಬೆ ಕಟ್ಟಿದ ಹಾಗೆ
ನಾಯಿಯ ಕನಸೆಲ್ಲ ಮೂಳೇನೇ.
ಕೊಡಲಿ ಕಾವು ಕುಲಕ್ಕೆ ಸಾವು
ವ್ರತ ಕೆಟ್ಟರೂ ಸುಖ ಪಡಬೇಕು
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
ದಾನಿಗೆ ದೀನತನ ಸಲ್ಲ, ಜ್ಞಾನಿಗೆ ಮೌನ ಸಲ್ಲ
ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
ಆತುರಕ್ಕೆ ಅಜ್ಜಿ ಮೈನೆರೆದಳು
ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
ಉ.. ಕುಡಿದರೂ ತನ್ನಿಚ್ಚೇಲಿರಬೇಕು
ಎಲ್ಲಾರ ಮನೆ ದೋಸೆನೂ ತೂತೆ.
ನೀನು ಮೊಳ ಬಿಟ್ಟರೆ,ನಾನು ಮಾರು ಬಿಡುತ್ತೇನೆ
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ತಾನು ತಿಂಬೋದು ಪಲ್ಲೆ ಸೊಪ್ಪು
ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
ಹಾಲಿಗಿಂತ ಕೆನೆ ರುಚಿ.
ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ಚಿನ್ನಕ್ಕೂ ಕಬ್ಬಿಣಕ್ಕೂ ಹೆಚ್ಚು ಕಡಿಮೆ ಇಲ್ಲವೇ?
ಬೇಲಿಯೇ ಎದ್ದು ಹೊಲ ಮೇದಂತೆ
ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಹಲಸಿನ ಹಣ್ಣು ಬೇಕು ಅಂಟು ಬೇಡ ಅಂದ್ರೆ ಹೇಗೆ
ಸತ್ತು ಕೊಳ್ಳೋ ಸೊರ್‍ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
ಯಾವ ಚಿಂತೇನೂ ಮಾಡದೋನ ಹೆಂಡ್ತಿ ಗಂಡಿದ್ದೂ ಮುಂಡೆ
ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
ಹೇಳೂದೆಲ್ಲ ಆಛಾರ ತಿನ್ನೂದು ಬದ್ನಿಕಾಯಿ..
ಸುಂಕದವನ ಮುಂದೆ ಸುಖದುಃಖವೇ
ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
ತಬ್ಬಳಿ ದೇವರಿಗೆ ತಂಗಳ ನೈವೇದ್ಯ
ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
ಹಾರೋ ಹಕ್ಕಿಗೆ ಹಾದರ ಕಟ್ಟಿದರು.
ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಬರಿಗೈಯವರ ಬಡಿವಾರ ಬಹಳ.
ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ಬಿಳಿ ಆನೆ ಸಾಕಿದ ಹಾಗೆ
ನಿನ್ನ ಮಾರಿ ಮಣ್ಣಾಗೆ ಅಡಗಲಿ
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಐದು ಬೆರಳೂ ಒಂದೇ ಸಮ ಇರೋಲ್ಲ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
ಕೈಲಾಗದೋನು ಮೈ ಪರಚಿಕೊಂಡ
ಯುದ್ಫ ಕಾಲದಲ್ಲಿ ಶಸ್ತ್ರಾಭ್ಯಾಸ.
ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
ಅಪ್ಪನ ಕಾಲಕ್ಕೆ ಅರಮನೆ, ಮಗನ ಕಾಲಕ್ಕೆ ಬರೀಮನೆ.
ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
’ಕೋ’ ಅನ್ನೋದು ಕುಲದಲ್ಲಿಲ್ಲ ,’ತಾ’ ಅನ್ನೋದು ತಾತರಾಯನ ಕಾಲದ್ದು
ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
ಕನ್ನಡಿ ಒಳಗಿನ ಗ೦ಟು ಕೈಗೆ ದಕ್ಕೀತೆ ?
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು
ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
ಧೈರ್ಯವಿದ್ದವನಿಗೆ ದೈವವೂ ಅನುಕೂಲ.
ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
ಕಯ್ಯಾರೆ ಮಾಡುವ ಧರ್ಮ ಲೇಸು
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
ಬೇಲಿನೆ ಎದ್ದು ಹೊಲ ಮೇಯಿತಂತೆ
ತಾಳು ಬಡಿದರೆ ಕಾಳು ಸಿಕ್ಕೀತೇ
ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
ಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ಹಸನಾದ ಮಾತಿಗೆ ಜೀವ ಬೆಸನಾಯ್ತು
ಹೆ೦ಗಸಿನ ಬುದ್ಧಿ ಮೊಣಕಾಲ ಕೆಳಗೆ
ಬಂದದ್ದು ಬಿಡಬಾರದು ಬಾರದ್ದು ಬಯಸಬಾರದು.
ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
ಪಾಪ ಅಂದ್ರೆ ಕರ್ಮ ಬರ್ತದೆ
ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.
ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
ಕಚ್ಚೋ ನಾಯಿ ಬೊಗಳುವುದಿಲ್ಲ
ಟೊಣಪೆ (ಗಾತ್ರದಲ್ಲಿ ದೊಡ್ಡದಾದ) ಶಾಸ್ತ್ರಕ್ಕೆ ಹೆಣಗುವುದೇ ಅರ್ಥ
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
ಕೆರೆಗೆ ತೊರೆ ಕೂಡಿ ಸರೋವರವಾಯ್ತು
ವಶಗೆಡದೆ ಹಸಗೆಡಲ್ಲ
ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಗಳಕ್ಕನೇ ಉಂಡವ ರೋಗಿ ಗಳಿಗೆ ಉಂಡವ ಭೋಗಿ
ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
ಇಕ್ಕೇರಿ ತನಕ ಬಳಗ,
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ನೆಚ್ಚಿನೆಮ್ಮೆ ಕೋಣನನ್ನೀಯಿತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ತಾಸಿನ ಗೊತ್ತು ದಾಸಿಗೆ ತಿಳಿದೀತೇ?
ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
ಪಾಪಿಗೆ ಪರಮಾಯು ಲೋಭಿಗೆ ಚಿರಾಯು .
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
ಕುರು ಮೇಲೆ ಬರೆ ಎಳೆದ ಹಾಗೆ
ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಅತಿಯಾದರೆ ಅಮೃತವೂ ವಿಷ
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಲಂಘನಮ್ ಪರಮೌಷಧಮ್
ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ಚೋಟು ಕಡಿಮೆ ಅಗಳು ದಾಟಿದ ಹಾಗೆ
ಅಹಂಕಾರಕ್ಕೆ ಉದಾಸೀನವೇ ಮಟ್ಟು.
ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
ಸೋದರ ಮಾವನ ಚಾಳು ತುಂಡಪುಂಡರ ಪಾಲು
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
ತನ್ನೂರಲ್ಲಿ ರಂಗ, ಪರೂರಲ್ಲಿ ಮಂಗ
ಈಸಿ ನೋಡು , ಇದ್ದು ಜೈಸಿ ನೋಡು
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
ವಿನಾಶ ಕಾಲೇ ವಿಪರೀತ ಬುದ್ಧಿ
ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
ಸತ್ತ ಮೇಲಿನ ಸೊರ‍್ಗಕ್ಕಿಂತ ಇದ್ದ ನರಲೋಕ ವಾಸಿ
ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
ತಾಯಂತೆ ಕರು ನಾಯಂತೆ ಬಾಲ
ನಾಮವಿದ್ದವನಿಗೆ ಕಾಮ ಕಡಿಮೆಯೇ?
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಪಾಪಿ ಚುನಾವಣೆಗೆ ನಿ೦ತರೆ ಮೂರೇ ಓಟು.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
ಕೋಟಿ ವಿದ್ಯೆಗಿ೦ತ ಮೇಟಿ ವಿದ್ಯೆಯೇ ಮೇಲು.
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಹೆತ್ತವರು ಹೆಸರಿಕ್ಕ ಬೇಕು
ಹತ್ತಿರಕ್ಕೆ ಬಂದರೆ ಹಡಿಕ್ ನಾತ
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಮುಖ ನೋಡಿ ಮನ ತಿಳಿ.
ಉದ್ಯೋಗವೇ ಗಂಡಸಿಗೆ ಲಕ್ಷಣ
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ಬಂದ ದಿವಸ ನೆಂಟ, ಮರು ದಿವಸ ಬಂಟ, ಮೂರನೇ ದಿವಸ ಕಂಟ.
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ಚ೦ಡಾಲ ದೇವರಿಗೆ ಚಪ್ಪಲಿ ಪೂಜೆ
ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ .
ಏರಿದವ ಇಳಿದಾನು ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
ಬಂಗಾರಕ್ಕೆ ಕುಂದಣವಿಟ್ಟಂತೆ
ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
ಬೆಂದ ಮನೇಲಿ ಹಿರಿದದ್ದೇ ಲಾಭ
ತಲೇ ಮೇಲಣ ಬರಹ ಎಲೆಯಿಂದ ಒರೆಸಿದರೆ ಹೋದೀತೇ
ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
ತರುವವ ಹೋದಮೇಲೆ ಮರಗುವವರುಂಟೇ
ಸ೦ಬಳ ಸಾರಿಗೆ ಏನಿಲ್ಲದಿದ್ದರೂ ನನ್ನ ಗ೦ಡನ್ನ ಸುಬೇದಾರ ಅ೦ದರೆ ಎಷ್ಟೋ ಹೆಚ್ಚಳ ಅ೦ದಳ೦ತೆ.
ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
ಉಪ್ಪು ತಿ೦ದಮೇಲೆ ನೀರ ಕುಡಿಯಲೇಬೇಕು.
ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
ತಡವಿದರೆ ಮಡಿ ಸಹಾ ಕೆಡುವುದು
ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
ತರಲೆ ಕೇಳುವವ ಮರುಳಗಿಂತ ಕಡೆ
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ’ಭುಸ್’ ಅಂತಂತೆ
ಹುಣ್ಣು ಮಾದರೂ ಕಲೆ ಮಾದೀತೇ
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ತಿರುಪಿನಂತೆ ಇರಬೇಕು ತಿಳಿದವ
ಬೆಣ್ಣೇಲಿ ಕೂದಲು ತೆಗೆದ ಹಾಗೆ
ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
ಅರವತ್ತಕ್ಕೆ ಅರಳು ಮರಳು
ತಾವು ಮಾಡುವುದು ಗಂಧರ್ವರು ಮಾಡಿದರು
ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಸ್ವರ್ಗವೂ ತಪ್ಪಿತು ದುರ್ಗವೂ ತಪ್ಪಿತು
ಅಕ್ಕನ ಹಗೆ ಬಾವನ ನೆಂಟು
ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
ಒನಕೆ ಮುಂಡು ಚಿಗುರಿದಂತೆ
ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
ಎಲ್ಲರ ಮನೆ ದೋಸೇನೂ ತೂತೇ.
ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ಕೊಂಕಿಗೆ ಕೊಂಕೇ ಮದ್ದು
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
ಹಾಲು ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
ಮೋಕ್ಷಕ್ಕೆ ಜ್ಞಾನ ಬೇಕು ಯೋಗಕ್ಕೆ ಧ್ಯಾನ ಬೇಕು
ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
ನೇಮ ಉಳ್ಳವನ ಕಂಡರೆ ಯಮನಿಗೂ ಭಯ
ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ಮೊಂಡ ಕೊಡಲಿ ರಟ್ಟೆಗೆ ಮೂಲ
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
ಹುಚ್ಚುಮು೦ಡೆ ಮದುವೇಲಿ ಉ೦ಡವನೇ ಜಾಣ.
ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
ದುಡಿಮೆಯೇ ದುಡ್ಡಿನ ತಾಯಿ
ತೋಳ ಬಿದ್ದರೆ ಆಳಿಗೊಂದು ಕಲ್ಲು
ಸಾದೆತ್ತಿಗೆ ಎರಡು ಹೇರು (ಹೊರೆ)
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಭಾವಿಗೆ ಬಿದ್ರೆ, ಸಾಲಿಗ್ರಾಮ ಸಿಗ್‌ತಂತೆ
ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
ಕಿಡಿಯಿಂದ ಕಾಡ ಸುಡಬಹುದು
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
ಊಟಕ್ಕಿಲ್ಲದ ಉಪ್ಪಿನಕಾಯಿ …ಕ್ಕೆ ಸಮಾನ
ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
ಉಪಕಾರಕ್ಕೋಗಿ ಉಪದ್ರ ಬಂತು
ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
ಜೋಡಿದ್ದರೆ ನಾಡು ತಿರುಗಬಹುದು.
ಬೆಳೆಯುವ ಪೈರು ಮೊಳಕೆಯಲ್ಲಿ
ಲೊಳಲೊಟ್ಟೆ ಗಂಡನಿಗೆ ಹಳಸಿದ ಊಟ
ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ,
ನುಡಿಯೊಳು ಕ೦ಪಿಡುವುದು ಬದುಕು
ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
ತೋಟದ ಬೇಲಿಯನ್ನು ದಾಟಿ ನೋಡದವರಾರು
ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
ಬಂದ ದಾರಿಗೆ ಸುಂಕವಿಲ್ಲ
ಆಗೊದೆಲ್ಲ ವೊಳ್ಳೆದಕ್ಕೆ
ದಾಯವಾಗಿ ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಬಟ್ಟೆ ಮಾಸಿದರೆ ಅಗಸನಿಗೆ, ನಾಲಿಗೆ ಮಾಸಿದರೆ ಕೆರಕ್ಕೆ
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ.
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಸಂತೆ ಕಟ್ಟೋಕು ಮೊದಲೇ ಸೇರಿದರು
ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ?
ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
ತಟ್ಟಿನಲ್ಲಿ ಬಿದ್ದಾಗ್ಯೆ ಗಟ್ಟಿ ಆಗಲಾರ
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ವಜ್ರಕ್ಕೆ ಸಾಣಿ ಹಿಡಿದಂತೆ
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
ಮನೆಗೆ ಮಾರಿ, ಊರಿಗೆ ಉಪಕಾರಿ.
ಯಾರನ್ನ ನಂಬಿದರು ಆರೈದು ನಂಬಬೇಕು
ತಲೆ ಸೀಳಿದರೆ ಎರಡಕ್ಷರ ಇಲ್ಲ
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
ಸೂಳೆ ಪಾಪ ಸನ್ಯಾಸಿಗೆ
ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
ಅರಿತರೆ ಮಾತನಾಡು ಮರೆತರೆ ಕೂತು ನೋಡು
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
ತವಕ ಪಟ್ಟವ ತಬ್ಬರಿಸಿ ಬಿದ್ದ
ಹಾಲಿನಲ್ಲಿ ಹುಳಿ ಹಿಂಡಿದಂತೆ
ಆಲಸಿ-ಮುಂಡೇದಕ್ಕೆ ಎರಡು ಖರ್ಚು, ಲೋಭಿ-ಮುಂಡೇದಕ್ಕೆ ಮೂರು ಖರ್ಚು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು ಅರಗಿನಂತೆ ತಾಯಿ,
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
ಆಪತ್ತಿಗಾದವನೇ ನೇಂಟ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಬೇಕೆಂಬುದು ಬಾಳು ಸಾಕೆಂಬುದು ಸಾವು
ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
ವೇದ ಸುಳ್ಳಾದ್ರು ಗಾದೆ ಸುಳ್ಳಲ್ಲ.
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಅರುಗೆಟ್ಟ ನಿದ್ದೆ ಇರಗೆಟ್ಟು ಸತ್ತಂತೆ
ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
ಬಲ್ಲಿದವನಿಗೆ ಕಬ್ಬು.
ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
ತೇಗಿ ತೇಗಿ ಬೀಗಿ ಬಿದ್ದ
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
ತಾಯೀನೇ ತಿಂದೋಳು, ಅತ್ತೇನ ಬಿಟ್ಟಾಳೆಯೇ?
ಮಾತು ಬೆಳ್ಳಿ; ಮೌನ ಬಂಗಾರ
ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ನಾಳೆ ಯಾರೋ ನಾನು ಯಾರೋ!
ಪಾಲಿಗೆ ಬಂದದ್ದೆ ಪರಮಾನ್ನ.
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
ಹಣ ಇಲ್ಲದವ ಹೆಣಕ್ಕಿಂತ ಕಡೆ
ತಳಾ ಬಿಟ್ಟು ಬಂಡಿ ಹಾರದು
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ತನ್ನ ತಾನರಿತರೆ ತನ್ನರಿವೆ ಗುರು
ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಕಷ್ಟಕ್ಕೆ ಕರೆಯಬೇಡ…ಊಟಕ್ಕೆ ಮರೆಯಬೇಡ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ನಾಯಿ ಮುಟ್ಟಿದ ಮಡಕೆ ನಾಯಿ ಕೊಳ್ಳಿಗೆ (ಕೊರಳಿಗೆ) ಕಟ್ಟು
ಕೃಷಿತೋನಾಸ್ತಿ ದುರ್ಭಿಕ್ಷಂ (ಸಂಸ್ಕೃತ)
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
ತಾನೂ ತಿನ್ನ, ಪರರಿಗೂ ಕೊಡ.
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಅತ್ತು ಹೆದರಿಸೋನೊಬ್ಬ
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಹೂಡಿದರೆ ಒಲೆ, ಮಡಿದರೆ ಮನೆ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ತುಂಬಿದ ಕೊಡ, ತುಳುಕೋದಿಲ್ಲ
ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
ಜಲ ನೋದಿ ಭಾವಿ ತೆಗೀಬೇಕು, ಕುಲ ನೋಡಿ ಹೆಣ್ಣು ತರ್ಬೇಕು.
ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
ಶಾನುಭೋಗರ ಮನೇಲಿ ಶೋಭನ ಅಂದ್ರೆ ಪಟೇಲನ ಮನೇಲಿ ನಿದ್ದೆ ಮಾಡ್ಲಿಲ್ವಂತೆ
ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
ಮಂದಾಳಿಗೊಂದು ಮುಂದಾಳು
ಮುದುಕೀ ನಿನ್ನಾಟ ಮುಂದೈತಿ.
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
ಚೌಲೋಪನಯನವಾಗದವ ನವಿಲಿಗಿಂತ ಕಡೆ
ಆಸೆಗೆ ತಕ್ಕ ಪರಿಶ್ರಮ ಬೇಕು.
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
ಆನೆಯಂಥದೂ ಮುಗ್ಗರಿಸ್ತದೆ
ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
ಮಾಡಿದ್ದುಣ್ಣೋ ಮಾರಾಯ
ಗಾಳಿ ಬ೦ದಾಗ ತೂರಿಕೋ.
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಕಡ್ಡೀನ ಗುಡ್ಡ ಮಾಡು.
ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ಬಲ್ಲವನೇ ಬಲ್ಲ ಬೆಲ್ಲದ ರುಚಿಯ
ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಕಿಡಿಯಿಂದ ಕಾಡ ಸುಡ ಬಹುದು
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್.
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
ಕಬ್ಬು ಡೊಂಕಾದ್ರೆ ಸವಿ ಡೊಂಕೇ
ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
ತರ್ಕಾ ಮಾಡುವವ ಮೂರ್ಕನಿಂದ ಕಡೆ
ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
ನಿನ್ನ ಮನೆ ಎಕ್ಕುಟ್ಟಿ ಹೋಗ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
ತರುವವ ಮರೆತರೆ ಮೊರ ಏನು ಮಾಡೀತು
ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
ಗಳಕ್ಕನೇ ಉಂಡವ ರೋಗಿ, ಗಳಿಗೆ ಉಂಡವ ಭೋಗಿ
ಹೂವಿನಿಂದ ನಾರಿಗೂ ಸ್ವರ್ಗ
ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು
ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
ನಿಜ ಆಡಿದರೆ ನಿಷ್ಠೂರ ಇದ್ದದ್ದು ಹೋಯಿತು
ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
ಆತುರಗಾರನಿಗೆ ಬುದ್ಧಿ ಮಟ್ಟ
ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
ಏತಿ ಅಂದರೆ ಪ್ರೇತಿ
ತಾ ಕೋಡಗ ಪರರ ಅಣಕಿಸಿತು
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
ಆಡಿ ಪೋಕರಿ ಅನ್ನಿಸಿಕೊಳ್ಳುವುದಕಿಂತ ಆಡದೆ ಮೂಗ ಅನ್ನಿಸಿಕೊಳ್ಳುವುದು ಮೇಲು.
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
ನಿನ್ನ ನಾಲಗೆ ಸೇದು ಹೋಗ
ಆಪತ್ತಿಗಾದವನೇ ನೆಂಟ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
ಗುಂಪಿನಲ್ಲಿ ಗೋವಿಂದ
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಆಟ ಕೆಟ್ಟರೆ ದೀವಟಿಗೆಯವನ ಸುತ್ತ
ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳಾವ!
ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
ತಬ್ಬಲಿ ತಬಕು ಕದ್ದು ಜಗಲೀಲಿ ಸಿಕ್ಕಿಬಿದ್ದ
ಹೆಣ್ಣಿನ ಬಾಳು ಕಣ್ಣೀರಿನ ಗೋಳು
ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
ಬಡವೆ ಸೀರೆ ಉಡದೆ ಮಾಸಿತು
ಹಾಸಿಗೆ ಇದ್ದಷ್ಟು ಕಾಲು ಚಾಚು
ಬೊಗಳುವ ನಾಯಿ ಕಚ್ಚುವುದಿಲ್ಲ
ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
ಚೇಳಿಗೆ ಮುತ್ತು ಕೊಟ್ಟಂಗೆ ಚೆಲ್ಲು ಮುಕ್ಕನ ಸಂಗ.
ತಾಳಿದವನು ಬಾಳಿಯಾನು
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಓದುವಾಗ ಓದು, ಆಡುವಾಗ ಆಡು.
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿನೇ
ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
ಹಿರೇ ಕುದರೆ ಚೇಷ್ಟೆ ತಾನು ಬಾಳಲಾರದೆ ವಿಧಿಯ ಬೈದಂತೆ
ತಾಯಿ ಬೇಕು ಇಲ್ಲವೇ ಬಾಯಿ ಬೇಕು.
ನೀ ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಎಲ್ಲಾ ಜಾಣ,ತುಸಾ ಕೋಣ.
ತೂತು ಗತ್ತಲೇಲಿ ತಾತನ ಮದುವೆ
ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
ಮಾತು ಬೆಳ್ಳಿ, ಮೌನ ಬಂಗಾರ
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ದೇವರು ವರ ಕೊಟ್ಟರು ಪೂಜಾರಿ ಕೊಡಬೇಕಲ್ಲ.
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ಉತ್ತಮನು ಎತ್ತ ಹೋದರೂ ಶುಭವೇ
ಹಾವು ಸಾಯಬಾರದು , ಕೋಲು ಮುರೀಬಾರದು
ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
ಸಾಲ ಕೊಳ್ಳುವಾಗ ಒಂದು ರಾಗ, ಸಾಲ ಹೊಳ್ಳಿ ಕೊಡುವಾಗ ನಾನಾ ರಾಗ
ಗ್ರಾಮ ಶಾ೦ತಿಗೆ ತಳವಾರ ತಲೆ ಬೋಳಿಸಿಕೊ೦ಡನ೦ತೆ.
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
ಹೇಮಗೇಡಿ ನೇಮ ಬೆಳಗಿದ ಭಂಗಿ
ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ.
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
ಹಾರುವ ಆಳಲ್ಲ, ಬಾಳೆ ದಡಿಯಲ್ಲ
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
ಹಣ ಹಾದರ ಬಿತ್ತು ಹೊನ್ನು ತೊನ್ನು ಮುತ್ತು.
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
ಹಾಳೂರಿಗೆ ಉಳಿದೋನೇ ಗೌಡ,
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
ವಿಧಿ ಕಾಣದ ಎಡೆಗಳಿಲ್ಲ
ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
ಆಳಾಗಬಲ್ಲವನು ಅರಸನಾಗಬಲ್ಲ.
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
ಕೊಲ್ಲದಿರುವುದೇ ಧರ್ಮ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿತ೦ತೆ.
ತನಗಿಲ್ಲದ್ದು ಎಲ್ಲಿದ್ದರೇನು
ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
ಆಪತ್ತಿಗಾದವನೇ ನಿಜವಾದ ಗೆಳೆಯ.
ಶಿಸ್ತುಗಾರ ಪುಟ್ಟಶಾಮಿ
ಹಸಿ ಗೋಡೆ ಮೇಲೆ ಹರಳು ಎಸೆದಂತೆ
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ತರಬಲ್ಲವನ ಹೆಂಡತಿ ಅಡಜಾಣೆ
ಕರುಬಿದವರ ಮನೆ ಬರಿಮನೆ
ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ‘ಭುಸ್’ ಅಂತಂತೆ
ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
ಮಂತ್ರಕ್ಕಿಂತ ಉಗುಳೇ ಜಾಸ್ತಿ
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
ಆಡಿ ಉಂಡ ಮೈ ಅಟ್ಟು ಉಂಡೀತೇ?
ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
ಕೊಡುವ ದೇವರು ಬಡವನೇ?
ಎಲ್ಲಾ ಬಣ್ಣ ಮಸಿ ನುಂಗಿತು
ಆವು ಕಪ್ಪಾದ್ರೆ ಹಾಲು ಕಪ್ಪೇನು
ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
ಜಾರುವುದು ತಪ್ಪಿದರೆ ಏರುವುದು ಸಾಧ್ಯ.
ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ. .
ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
ಹಣ ಎರವಲು ತಂದು ಮಣ ಉರುವಲು ಕೊಂಡ
ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
ತಗಲಿದವನಿಗೆ ಹಗಲಿರುಳೇನು?
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಮಂತ್ರ ಸ್ವಲ್ಪ, ಉಗುಳೇ ಬಹಳ.
ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
ತೀರ್ಥಕ್ಕೆ ಥಂಡಿ, ಪ್ರಸಾದಕ್ಕೆ ಅಜೀರ್ಣ , ಮಂಗಳಾರತಿಗೆ ಉಷ್ಣ (ನಾಜೂಕು ದೇಹಸ್ಥಿತಿ)
ನಿಜವ ಹಿಡಿ ಘಟವ ನೆಚ್ಚದಿರು
ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
ದೇಶ ಸುತ್ತು ; ಕೋಶ ಓದು.
ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ … ಅದ್ದುವ ಬುದ್ಧಿ)
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
ನಗುವ ಹೆ೦ಗಸು, ಅಳುವ ಗ೦ಡಸು ಇಬ್ಬರನ್ನೂ ನ೦ಬಬಾರದು.
ಅತಿ ಆಸೆ ಗತಿ ಕೇಡು
ಅರಸು ಒಲಿದರೆ ಸಿರಿ ದೆಸೆಯಾಯ್ತು
ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
ತಿರುಳು ಹೋಗಿ ಬೆಂಡು ಉಳೀತು ತಿರೋಕಲ್ಲು
ತುಂಬಿದ ಕೊಡ ತುಳುಕುವುದಿಲ್ಲ
ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಅಗ್ಗದ ಆಸೆಗೆ ಗೊಬ್ಬರ ತಗೊಂಡರು
ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
ಹುಲಿ ಹಸಿದಾಗ ಹುಲ್ಲು ತಿಂದೀತೆ?
ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
ಪಾಪಿ ಚಿರಾಯು
ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ತಿಳಿದು ಒಡ್ಡೋ ತೀರು ಬಾಣವ
ಗಂಡ ಸರಿಯಿದ್ರೆ ಗುಂಡೂ ಪಾವನ
ಹಾದರಗಿತ್ತಿ ಗಂಡನ ನಂಬಳು
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
ತವಡು ತಿಂಬುವನಿಗೆ ವಯ್ಯಾರ ಯಾಕೆ
ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ
ಹುಣ್ಣಿನ ಮೇಲೆ ಉಪ್ಪು ಸವರಿದಂತೆ
ವೇದ ಸುಳ್ಳಾದರೂ ಗಾದೆ ಸುಳ್ಳಾಗದು.
ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
ತನ್ನ ತಾ ಬಲ್ಲವನೆ ಬಲ್ಲವ
ಹಿಂದಲ ಮಾತು ಮರಿ ಮುಂದಲ ಬಾಳು ಅರಿ
ಊರು ಸುಟ್ಟರೂ ಹನುಮಂತರಾಯ ಹೊರಗೆ
ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ಗಾಳಿ ಬಂದಾಗ ತೂರಿಕೋ
ಮಾಡಿದ್ದುಣ್ಣೋ ಮಹರಾಯ
ಕಲಹವೇ ಕೇಡಿಗೆ ಮೂಲ.
ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
ಹುಚ್ಚರ ಮದುವೆಯಲ್ಲಿ ಉಂಡವನೇ ಜಾಣ.
ಆಡು ಮುಟ್ಟದ ಸೊಪ್ಪಿಲ್ಲ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ನಿನ್ನ ಬಾಯಾಗೆ ಮಣ್ಣು ಹಾಕ
ಒಡೆಯನಿಗೆ ಹಾಲಿಲ್ಲವೆ೦ದು ಎಮ್ಮೆ ಈಯುತ್ಯೇ?
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಪಾಲಿಗೆ ಬಂದದ್ದು ಪಂಚಾಮೃತ
ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
ಹಾವಿಗೆ ಹಾಲೆರೆದರೇನು ಫಲ
ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
ಹಬ್ಬದ ದಿನವೂ ಹಳೇ ಗಂಡನೇ ?
ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
ತಾರುಣ್ಯವೇ ರೂಪು ಕಾರುಣ್ಯವೇ ಗುಣ
ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ಚಂಬು ಚರಿಗೆಗೆ ದರಿದ್ರವಾದರೂ ಹಂಚು ಹುಡಿಗೆ ದರಿದ್ರವಿಲ್ಲ
ಬೆಟ್ಟ ಮಹಮ್ಮದನ ಬಳಿ ಬರಲ್ಲ,ಮಹಮ್ಮದನೇ ಬೆಟ್ಟದ ಬಳಿ ಹೋಗಬೇಕು
ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಕರಣಗಳ ತಡೆದು ನಿಲಬಾರದು
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಬಡವ ನೀ ಸೆಣಸಿ ಕೆಡಬೇಡ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಬೇಲಿಯೇ ಎದ್ದು ಹೊಲ ಮೇಯ್ದಂತೆ
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊ೦ಡ೦ತೆ.
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಸಂತೇಲಿ ಮಂತ್ರ ಹೇಳಿದಂಗೆ
ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
ಶಿವ ಪೂಜೇಲಿ ಕರಡಿ ಬಿಟ್ಟಂಗೆ
ಕಡ್ಡೀನ ಗುಡ್ಡ ಮಾಡು
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಸುಡುವ ಮನೆಯ ಗಳ ಹಿರಿದಂತೆ
ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
ತಿರುಳು ಹೋಗಿ ಬೆಂಡು ಉಳೀತು
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
ಬೈದು ಹೇಳಿದವರು ಬದುಕಕ್ಕೆ ಹೇಳಿದರು
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ರಸ ಬೆಳೆದು ಕಸ ತಿನ್ನಬೇಡ,
ಇಡೀ ಮುಳುಗಿದರೂ ಮೂಗು ಮೇಲೆ
ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
ಊಟ ಬಲ್ಲವನಿಗೆ ರೋಗವಿಲ್ಲ , ಮಾತು ಬಲ್ಲವನಿಗೆ ಜಗಳವಿಲ್ಲ.
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ಎದ್ದರೆ ಆಳಲ್ಲ
ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಒಲಿದರೆ ನಾರಿ ಮುನಿದರೆ ಮಾರಿ
ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ಜೀನ ಗಳಿಸಿದ ;ಜಾಣ ತಿಂದ
ಅಳಿಲ ಸೇವೆ, ಮಳಲ ಭಕ್ತಿ
ಉಣ್ಣುವಾಗ ಎರಡು ತುತ್ತು ಕಡಿಮೆ ಉಣ್ಣು.
ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
ಹೊರಗೆ ಥಳುಕು, ಒಳಗೆ ಹುಳುಕು
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
ಹಾಳೂರಿಗೆ ಉಳಿದವನೇ ಗೌಡ
ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
ಕೈ ಕೆಸರಾದರೆ ಬಾಯಿ ಮೊಸರು.
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ವೈರವಿದ್ದವನ ಕರೆದು ಮುಖಕ್ಷೌರ ಮಾಡಿಸಿಕೊ೦ಡಹಾಗೆ.
ಗಂಡಸಿಗೇಕೆ ಗೌರಿ ದು:ಖ ?
ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಅಲ್ಪರ ಸಂಗ ಅಭಿಮಾನ ಭಂಗ
ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
ಆನೆಗೂ ಅಡಿ ತಪ್ಪೀತು
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
ಸದಾಶಿವನಿಗೆ ಅದೇ ಧ್ಯಾನ
ಸ೦ಕಟ ಬ೦ದಾಗ ವೆ೦ಕಟರಮಣ.
ಬೆಳ್ಳಗಿರೋದೆಲ್ಲಾ ಹಾಲಲ್ಲ
ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
ಸೇರಿಗೆ ಸವ್ವಾಸೇರು
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಆಲಸ್ಯಂ ಅಮೃತಂ ವಿಷಂ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
ಆನೆಗೆ ಚಡ್ಡಿ ಹೊಲಿಸಿದ ಹಾಗೆ ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
ಎರಡೂ ಕೈ ತಟ್ಟಿದರೆ ಸದ್ದು
ಇಂದಿನ ಸೋಲು ನಾಳಿನ ಗೆಲುವು.
ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಚೌಲದಾಗ ದೌಲು ಮಾಡು
ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಸಂಕಟ ಬಂದಾಗ ವೆಂಕಟರಮಣ
ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
ಕಣ್ಣೆರಡಾದರೂ ನೋಟ ಒಂದೇ
ಎತ್ತು ಮಾರಿದವಗೆ ಹಗ್ಗದ ಆಸೆಯೇ
ಬಾಯಿಯಲ್ಲಿ ಬೆಲ್ಲ ಕರುಳು ಕತ್ತರಿ.
ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
‘ಕೋ’ ಅನ್ನೋದು ಕುಲದಲ್ಲಿಲ್ಲ ,’ತಾ’ ಅನ್ನೋದು ತಾತರಾಯನ ಕಾಲದ್ದು
ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
ಚಚ್ಚಚ್ಚೀ ನಿನ್ನ ಚುಚ್ಚೋರು ಯಾರು ಅನ್ನೋವತ್ಗೆ ಕರಿಕಂಬ್ಳೋರು ಕಾಗಿನ ದೊಡ್ಡೋರು ಇಳ್ಳೊತ್ತಿನಲ್ಲೆ ಬಂದು ಇಳ್ಳೊತ್ತಿನಲ್ಲೆ ಹೋಗೋರು ಅಂದ್ಲಂತೆ.
ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
ಏನಾದರೇನು ತಾನು ತಾನಾಗದ ವರೆಗೆ
ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
ಹೆದರುವವರ ಮೇಲೆ ಕಪ್ಪೆ ಎಸೆದರ೦ತೆ.
ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಹಂಚು ಕಾಣದ ಕೈ ಕಂಚು ಕಾಣ್ತು
ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಬಿರಿಯ ಉನ್ದ ಬ್ರಹ್ಮನ ಬಿಕ್ಶೆ ಬೆದಿದನನ್ಥೆ
ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
ಇರೋ ಮೂವರಲ್ಲಿ ಕದ್ದೋರು ಯಾರು ?
ಕುಲ ಬಿಟ್ಟರೂ ಛಲ ಬಿಡಬೇಡ.
ಅಂದು ಬಾ ಅಂದ್ರೆ ಮಿಂದು ಬಂದ
ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಬಾಳೆ ಬೆಳೆದವ ಬಾಳಿಯಾನು.
ಮಾಡುವವ ಉತ್ತಮ ಆಡಿ ಮಾಡದವ ಅಧಮ
ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
ತಾಯಿಗೆ ಸೇರದ್ದು ನಾಯಿಗೂ ಸೇರದು
ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
ಊರಿಗೆ ದಾರೀಯ ಯಾರು ತೋರಿದರೇನು
ಗುರುವಿಗೆ ತಿರುಮಂತ್ರ
ದೇವನೊಬ್ಬ ನಾಮ ಹಲವು
ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ … ಕಂಡು ಇಳಿಬಿತ್ತು
ತಾನು ಕಳ್ಳ ,ಪರರ ನಂಬ
ಆಸೆಗೆ ಕೊನೆಯಿಲ್ಲ
ಡಂಬು ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
ಅತಿಯಾದರೆ ಆಮೃತವೂ ವಿಷವೇ
ಬೆನ್ನ ಹಿಂದೆ ಉರಿಯೋ ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
ತನ್ನ ತಾ ತನ್ನಿಂದಲೇ ಅರಿಯಬೇಕು
ಕಂಡೋರ ಆಸ್ತಿಗೆ ನೀನೇ ಧಣಿ
ಕಷ್ಟ ಪಟ್ಟರೆ ಫಲವುಂಟು
ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಕಷ್ಟ ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
ನಿದ್ದೆ ಗೈಯೋನ ಹೊತ್ತು ನುಂಗ್ತು
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
ಕೆಟ್ಟು ಪಟ್ಟಣ ಸೇರು.
ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಬೊಗಳುವ ನಾಯಿ ಕಚ್ಚುವುದಿಲ್ಲ.
ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ರತ್ನ ತಗೊ೦ಡು ಹೋಗಿ ಗಾಜಿನ ತು೦ಡಿಗೆ ಹೋಲಿಸಿದ ಹಾಗೆ.
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ಎದ್ದೋಗೋ ಮಾತು ಬಿದ್ದೋಗಲಿ
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
ಎಲ್ಲಾ ಜಾಣ, ತುಸು ಕೋಣ.
ಹೆಣ್ಣಿಗೆ ಹೆಣ್ಣೇ ವೈರಿ
ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
ಸ್ವತಂತ್ರವೋ, ಸ್ವರ್ಗಲೋಕವೋ
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
ಬಡವರ ಮಾತು ನುಡಿ ನುಡಿಗೂ ಬೇಸರ
ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
ತನ್ನ ಓಣಿಯಲ್ಲಿ ನಾಯಿಯೂ ಸಿ೦ಹ.
ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
ಸಂದೀಲಿ ಸಮಾರಾಧನೆ
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಅಕ್ಕನ ಚಿನ್ನವಾದ್ರೂ ಅಕ್ಕಸಾಲಿ ಟೊಣೆಯದೆ(=ಕದಿಯದೆ) ಬಿಡ
ಎರಡೂ ಕೈ ಸೇರಿದರೆ ಚಪ್ಪಾಳೆ
ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
ಹಾವು ಸಾಯಬಾರದು ;ಕೋಲು ಮುರಿಯಬಾರದು
ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
ಬಕ ಧ್ಯಾನದಂತೆ.
ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
ತೀಟೆ ಆದರೆ ತಾನೆ ಬರುತ್ತಾನೆ
ತುಂತುರು ಮಳೆಯಿಂದ ತೂಬು ಒಡೆದೀತೆ?
ತೀಟೆ ತೀರಿದಮೇಲೆ ಲೌಡಿ ಸಂಗ ಯಾಕೆ?
ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಬಡವನ ಸಿಟ್ಟು ದವಡೆಗೆ ಮೂಲ.
ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ

  ಗಾದೆ - ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೨ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೩ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೪ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೫ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಮಾಂಸದ ಬೆಲೆ - ಚಾಣಕ್ಯನ ಕಥೆ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೬ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೭ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೮ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೯ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೦ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಭೀಷ್ಮಾಷ್ಟಮೀ - ಮಾಘ ಶುದ್ಧ ಅಷ್ಟಮಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

Translate »